HomeIndiaಭರ್ಜರಿ ಗೆಲುವಿನ ವಿಜಯೋತ್ಸವ ವೇಳೆ ಅಗ್ನಿ ಅವಘಡ: ನೂತನ ಶಾಸಕ ಸೇರಿ 34 ಮಂದಿಗೆ ಗಾಯ

ಭರ್ಜರಿ ಗೆಲುವಿನ ವಿಜಯೋತ್ಸವ ವೇಳೆ ಅಗ್ನಿ ಅವಘಡ: ನೂತನ ಶಾಸಕ ಸೇರಿ 34 ಮಂದಿಗೆ ಗಾಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಹಾಗಾಂವ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಚಾಂದ್‌ಗಡ ಕ್ಷೇತ್ರದಿಂದ ಹೊಸದಾಗಿ ಆಯ್ಕೆಯಾದ ಸ್ವತಂತ್ರ ಶಾಸಕ ಶಿವಾಜಿ ಪಾಟೀಲ್ ಸೇರಿದಂತೆ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಚಂದಗಡದ ವಿಧಾನಸಭಾ ಚುನಾವಣೆಯಲ್ಲಿ ಶಿವಾಜಿ ಪಾಟೀಲ್ 24,134 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಿಜಯೋತ್ಸವದ ಸಂದರ್ಭದಲ್ಲಿ ಹೊಸದಾಗಿ ಚುನಾಯಿತ ಶಾಸಕ ಮತ್ತು ಅವರ ಬೆಂಬಲಿಗರು ಸಾಗುವಾಗ ಗುಲಾಲ್ ಬಣ್ಣದ ಪುಡಿಯಿಂದ ಬೆಂಕಿ ತಗುಲಿ ಭಾರೀ ಪ್ರಮಾಣದಲ್ಲಿ ಆವರಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular