ಶಿವಮೊಗ್ಗ: ಆಕಸ್ಮಿಕ ಬೆಂಕಿಯಿಂದಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಕ್ಷೇತ್ರದ ಬಳಿ ನಡೆದಿದೆ.
ಅದೃಷ್ಟವಶಾತ್ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ ಸಿಗಂದೂರು ಸಮೀಪ ಹುಲಿದೇವರಬನ ಗ್ರಾಮದ ಬಳಿ ಘಟನೆ ನಡೆದಿದೆ. ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಇದನ್ನು ಹುಲಿದೇವರಬನ ಗ್ರಾಮಸ್ಥರು ಗಮನಿಸಿ ಬಸ್ ನಿಲ್ಲಿಸಿದ್ದಾರೆ. ಗ್ರಾಮಸ್ಥರು ಕೂಡಲೇ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

