HomeLatest Newsಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ಸುಟ್ಟು ಕರಕಲಾದ 40 ಎಕರೆ ಕಬ್ಬಿನ ಗದ್ದೆ

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ಸುಟ್ಟು ಕರಕಲಾದ 40 ಎಕರೆ ಕಬ್ಬಿನ ಗದ್ದೆ

ಹಾವೇರಿ: ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿ 40 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಇದರಿಂದಾಗಿ 7 ಜನ ರೈತರಿಗೆ ಅಪಾರ ಹಾನಿಯಾಗಿದ್ದು, ಕಂಗಾಲಾಗಿದ್ದಾರೆ.

ಜಮೀನುಗಳಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಗದ್ದೆಗಳಿಗೆ ಬೆಂಕಿ ತಗುಲಿದೆ. ಕ್ಷಣಮಾತ್ರದಲ್ಲಿ ಬೆಂಕಿ ಪಕ್ಕದ ಗದ್ದೆಗಳಿಗೂ ವ್ಯಾಪಿಸಿದ್ದು, 40 ಎಕರೆ ಪ್ರದೇಶದ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿದೆ. ಸತ್ಯನಾರಾಯಣ ರಟ್ಟಿಹಳ್ಳಿ, ಕೃಷ್ಣಪ್ಪ, ಚನ್ನಪ್ಪ, ವಿರೂಪಾಕ್ಷಪ್ಪ ಸೇರಿದಂತೆ 7 ಜನ ರೈತರಿಗೆ ಸೇರಿದ ಕಬ್ಬಿನ ಬೆಳೆ ಸಂಪೂರ್ಣ ಹಾನಿಯಾಗಿದೆ.

ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ, ರೈತರು, ಗ್ರಾಮಸ್ಥರು ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ. ಕೊನೆಗೆ ಸತತ ಪ್ರಯತ್ನದಿಂದ ಬೆಂಕಿಯನ್ನು ನಿಯಂತ್ರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular