HomeKarnatakaBREAKING: ಗುಡಿಸಲಿಗೆ ಬೆಂಕಿ, ದಂಪತಿ ಸಜೀವ ದಹನ

BREAKING: ಗುಡಿಸಲಿಗೆ ಬೆಂಕಿ, ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.

ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 ವರ್ಷದ ಕರೀಂ ಸಾಬ್ ಟಪಾಲ ಮತ್ತು ಸಾಜನಬೀ ಟಪಾಲ(72) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿರುವ ಗುಡಿಸಲಿನಲ್ಲಿ ಕರೀಂಸಾಬ್ ಮತ್ತು ಸಾಜನಬೀ ವಾಸವಾಗಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಇಬ್ಬರೂ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular