
ಏಕಾಏಕಿ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ . ಕೊಠಡಿಯಲ್ಲಿದ್ದ ಹಳೇ ದಾಖಲಾತಿಗಳು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂಬುದಾಗಿ ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಹೇಳಲಾಗುತ್ತಿದೆ, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

