HomeIndiaBIG NEWS: ಮನೆಯಲ್ಲಿ ಪೂಜೆ ವೇಳೆ ಬೆಂಕಿ ದುರಂತ: ಮೂವರು ಮಕ್ಕಳು ಸಾವು

BIG NEWS: ಮನೆಯಲ್ಲಿ ಪೂಜೆ ವೇಳೆ ಬೆಂಕಿ ದುರಂತ: ಮೂವರು ಮಕ್ಕಳು ಸಾವು

ಕೋಲ್ಕತ್ತಾ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ದುರಂತವೊಂದು ಸಂಭವಿಸಿದ್ದು, ಮನೆಯಲ್ಲಿ ಪೂಜೆ ವೇಳೆ ಅಗ್ನಿ ಅವಘದ ಸಂಭವಿಸಿ ಮೂವರು ಮಕ್ಕಳು ಬಲಿಯಾಗಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಅಲುಬೇರಿಯದಲ್ಲಿ ನಡೆದಿದೆ.

ಹಬ್ಬದ ಹಿನ್ನೆಲೆಯಲ್ಲಿ ಮನೆಯೊಂದರಲ್ಲಿ ಪೂಜೆ ನಡೆಯುತ್ತಿತ್ತು. ಕಾಳಿ ಪೂಜೆ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಬೆಂಕಿಯಲ್ಲಿ ಸುಟ್ಟು ಹೋಗಿದ್ದಾರೆ.

ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದರು. 9 ವರ್ಷದ, 14 ವರ್ಷದ ಹಾಗೂ ಎರಡುವರೆ ವರ್ಷದ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular