ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಘೋರ ದುರಂತ: ಮಹಿಳೆ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕರಡಿಬಾವಿ ಪ್ರದೇಶದಲ್ಲಿ ಬುಧವಾರ ರಾತ್ರಿ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮಹಿಳೆಯೊಬ್ಬರು ಸಜೀವ ದಹನವಾಗಿದ್ದಾರೆ.

ಯಾಲಕಪ್ಪನಹಟ್ಟಿ ಗ್ರಾಮದ ಜಯಬಾಯಿ(50) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಮಹಿಳೆಗೆ ಪತಿ, ಮಕ್ಕಳು ಯಾರೂ ಇರಲಿಲ್ಲ. ಕೂಲಿ ಕೆಲಸ ಮಾಡಿಕೊಂಡು ಒಂಟಿಯಾಗಿ ಕರಡಿಬಾವಿ ಪ್ರದೇಶದ ಗುಡಿಸಲಿನಲ್ಲಿ ವಾಸವಾಗಿದ್ದರು. ಮಲಗಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಮಾಹಿತಿ ತಿಳಿದ ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ವೇಳೆಗಾಗಲೇ ಶೇಕಡ 80ರಷ್ಟು ಸುಟ್ಟು ಗಾಯಗಳಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೊಸದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read