ಕಲಬುರಗಿ : ಚಲಿಸುತ್ತಿದ್ದ ಕೆಕೆಆರ್ ಟಿಸಿ (KKRTC) ‘ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮದರಿ ಬಳಿ ಈ ಘಟನೆ ನಡೆದಿದೆ.
ಚಲಿಸುತ್ತಿದ್ದ ಕೆಕೆಆರ್ ಟಿಸಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಬಂದಿದೆ. ಕೂಡಲೇ ಅಲರ್ಟ್ ಆದ ಚಾಲಕ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ಗೆ ಬೆಂಕಿ ತಗುಲಿರುವ ಶಂಕೆಯಾಗಿದೆ.
ತಕ್ಷಣ ಸ್ಥಳೀಯರು ಬಸ್ ಗೆ ತಗುಲಿದ್ದ ಬೆಂಕಿ ನಂದಿಸಿದ್ದಾರೆ. ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಸ್ ಮದರಿ ಗ್ರಾಮದಿಂದ ಜೇವರ್ಗಿಗೆ ತೆರಳುತ್ತಿತ್ತು. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

