ಬೆಂಗಳೂರು : ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು –ಅನಂತರಪುರ ಹೈವೇಯಲ್ಲಿ ನಡೆದಿದೆ.
ಚಲಿಸುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು , ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ 2 :30 ರ ಸುಮಾರಿಗೆ ಈ ಘಟನೆ ನಡೆದಿದೆ .ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಎಲ್ಲಾ ಪ್ರಯಾಣಿಕರು ಬಸ್ ನಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.