
ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ರೈಲ್ವೇ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ. ಬೆಂಕಿ ಹತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ, ಇಂಜಿನ್ ತಾಂತ್ರಿಕ ತೊಂದರೆಯಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

