
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪೈಪ್ ಲೈನ್ ರಸ್ತೆಯ ಚೋಳರ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪರಿಣಾಮ ಬೆಂಕಿ ರಸ್ತೆಗೆ ವ್ಯಾಪಿಸಿ 8 ಬೈಕ್ ಗಳು ಧಗ ಧಗ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
3 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುತ್ತಿದೆ. ರಸ್ತೆಯಲ್ಲಿ 8 ಕ್ಕೂ ಹೆಚ್ಚು ಬೈಕ್ ಗೆ ಬೆಂಕಿ ತಗುಲಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.

