SHOCKING: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಬೆಂಕಿ ಹಚ್ಚಿ ಕೊಲೆ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಸಮೀಪದ ಬೆಳಲಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೇಲಿನ ಹನಸವಾಡಿ ಗ್ರಾಪಂ ವ್ಯಾಪ್ತಿಯ ಬೆಳಲಕಟ್ಟೆಯ ಮಹೇಶಪ್ಪ(60) ಮೃತಪಟ್ಟವರು. ಬಿಕ್ಕೋನಹಳ್ಳಿಯಲ್ಲಿರುವ ಪುತ್ರಿಯ ಮನೆಯಿಂದ ಬೈಕ್ ನಲ್ಲಿ ಬೆಳಲಕಟ್ಟೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾರೆ. ಮಹೇಶಪ್ಪನವರ ದೇಹ ಸಂಪೂರ್ಣ ಸುಟ್ಟಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಬೆಂಕಿಯ ತೀವ್ರತೆಯಿಂದಾಗಿ ದ್ವಿಚಕ್ರ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಳಕಟ್ಟೆ ಗ್ರಾಮದಲ್ಲಿ ಮಹೇಶಪ್ಪನವರಿಗೆ ಮೂರು ಎಕರೆ ಜಮೀನಿದ್ದು, ಸಂಬಂಧಿಯೊಂದಿಗೆ ಜಮೀನು ವಿಚಾರವಾಗಿ ಮನಸ್ತಾಪ ಇತ್ತು ಎಂದು ಹೇಳಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read