ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ ಅರೆಸ್ಟ್

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಣಿ ಅವರನ್ನು ಬಂಧಿಸಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಪ್ರಿಯಕರ ಸಂಜಯ್ ಗೆ ತಾನು ಬೆಂಕಿ ಹಚ್ಚಿಲ್ಲವೆಂದು ರಾಣಿ ಹೇಳಿಕೆ ನೀಡಿದ್ದಾರೆ. ಮೃತಪಟ್ಟ ಸಂಜಯ್ ಮತ್ತು ನನ್ನ ನಡುವೆ ಜಗಳವಾಗಿತ್ತು. ಈ ವೇಳೆ ಸಾಯುತ್ತೇನೆ ಎಂದು ಸಂಜಯ್ ಬೆದರಿಕೆ ಹಾಕಿ ಆತನೇ ಬಾಟಲಿಯಲ್ಲಿ ಪೆಟ್ರೋಲ್ ತಂದು ಸುರಿದುಕೊಂಡು ಬೆಂಕಿ ಕಡ್ಡಿ ಗೀಚಿ ಬೆದರಿಕೆ ಹಾಕಿದ್ದ. ಆಕಸ್ಮಿಕವಾಗಿ ಬೆಂಕಿ ತಗುಲಿತ್ತು ಎಂದು ತಿಳಿಸಿದ್ದಾರೆ.

ಆರೋಪಿಯ ವಿಚಾರಣೆ ನಡೆಸಿದ ಪೊಲೀಸರು ಎಫ್.ಎಸ್.ಎಲ್. ವರದಿಗಾಗಿ ಕಾಯುತ್ತಿದ್ದಾರೆ. ಹೋಂ ಗಾರ್ಡ್ ಆಗಿರುವ ರಾಣಿಗೆ ಸಂಜಯ್ ಮಾತ್ರವಲ್ಲದೆ ಮತ್ತೊಬ್ಬನೊಂದಿಗೆ ಸಲುಗೆ ಇತ್ತು. ಇದೇ ಜಗಳಕ್ಕೆ ಕಾರಣವೆಂದು ಹೇಳಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read