ಅಕ್ರಮ ಸಂಬಂಧ ಶಂಕೆಯಿಂದ ಘೋರ ಕೃತ್ಯ: ಪತ್ನಿ, ಮೂವರು ಮಕ್ಕಳಿಗೆ ಬೆಂಕಿ ಹಚ್ಚಿದ ಪಾಪಿ: ಪತ್ನಿ ಸಾವು, ಮಕ್ಕಳು ಗಂಭೀರ

ತುಮಕೂರು: ಅಕ್ರಮ ಸಂಬಂಧ ಶಂಕೆಯಿಂದ ವ್ಯಕ್ತಿಯೊಬ್ಬ ಹೆಂಡತಿ, ಮೂವರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಹೆಣ್ಣು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮುದ್ದನೇರಳೆಕೆರೆಯಲ್ಲಿ ಘಟನೆ ನಡೆದಿದೆ. ಪತ್ನಿ ವಿರುದ್ಧ ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ಪತಿ ರಾಮಾಂಜಿ ಇಂತಹ ಕೃತ್ಯವೆಸಗಿದ್ದಾನೆ. ಬೆಂಕಿ ಹಚ್ಚಿದ ಮೇಲೆ ಅವರು ಜೀವ ಉಳಿಸಿಕೊಳ್ಳಬಾರದು ಎಂದು ಕೊಠಡಿಗೆ ಬೀಗ ಹಾಕಿ ಪರಾರಿಯಾಗಿದ್ದಾನೆ.

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರಿಂದ ಶಾಂತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಣ್ಣು ಮಕ್ಕಳಾದ ಅಕ್ಷಯಾ,  ಅಕ್ಷಿತಾ, ಅಮೃತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರಿಗೂ ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಆರೋಪಿ ರಾಮಾಂಜಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಿಡಿಗೇಶಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read