HomeLatest NewsBIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಮೂವರು ದುರ್ಮರಣ

BIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಮೂವರು ದುರ್ಮರಣ

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದ್ ನಗರ ಜಿಲ್ಲೆಯ ಶಿವಕಾಶಿಯಲ್ಲಿ ನಡೆದಿದೆ.

ಇಲ್ಲಿನ ನಾರಾಯಣಪುರಂನಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ತಂಡ, ರಕ್ಷಣಾ ತಂಡ ದೌಡಾಯಿಸಿದ್ದು, ಫ್ಯಾಕ್ಟರಿಯಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular