HomeKarnatakaಗುಂಡೇಟು ಹೊಡೆದ ಅರಣ್ಯ ಇಲಾಖೆ ಸಿಬ್ಬಂದಿ ನಾಪತ್ತೆಯಾಗಿದ್ದಾರೆ: ಶಾಸಕ ಮಂಜುನಾಥ್ ಆಕ್ರೋಶ

ಗುಂಡೇಟು ಹೊಡೆದ ಅರಣ್ಯ ಇಲಾಖೆ ಸಿಬ್ಬಂದಿ ನಾಪತ್ತೆಯಾಗಿದ್ದಾರೆ: ಶಾಸಕ ಮಂಜುನಾಥ್ ಆಕ್ರೋಶ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಗುಂಡೇಟು ಹೊಡೆದ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.

ಹಸು ಹುಡುಕಲೆಂದು ಕಾಡಿಗೆ ಹೋಗಿದ್ದ ನಾಲ್ವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಾಣಿಗಳ ಬೇಟೆಗೆ ಬಂದಿದ್ದಾರೆಂದು ಭಾವಿಸಿ ಫೈರಿಂಗ್ ನಡೆಸಿದ್ದರು, ಗುಂಡಿನ ದಾಳಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಓರ್ವ ತಪ್ಪಿಸಿಕೊಂಡು ಬಚಾವಾಗಿದ್ದಾರೆ. ಮ್ರ‍ಿತರನ್ನು ಪೀಟರ್, ಕುಮಾರ್, ಅಂಥೋಣಿಸ್ವಾಮಿ ಎಂದು ಗುರುತಿಸಲಾಗಿದೆ. ಅಂಥೋಣಿಸ್ವಾಮಿ ನೀಡಿದ ದೂರಿನ ಮೇರೆಗೆ ಅರಣ್ಯ ಇಲಾಖೆ ಸಿ ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತ್ತೊಂದೆಡೆ ಮೃತರ ಕುಟುಂಬಗಳು ಹಾಗೂ ಸ್ಥಳೀಯರು ನ್ಯಾಯಕ್ಕಾಗಿ ಆಗ್ರಹಿಸಿ ಅರಣ್ಯ ಇಲಾಖೆ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಗುಂಡೇಟು ಹೊಡೆದ ಅರಣ್ಯ ಸಿಬ್ಬಂದಿಗಳು ತಲೆಮರೆಸಿಕೊಂಡಿದ್ದಾರೆ. ಈ ಬಗ್ಗೆ ಶಾಸಕ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಗುಂಡೇಟು ಹೊಡೆದ ಅರಣ್ಯ ಇಲಾಖೆ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಂಡು ಹಾರಿಸಿದ ಅರಣ್ಯ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರುವಂತೆ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ. ಈಗಲೇ ಅವರನ್ನು ಇಲ್ಲಿಗೆ ಕರೆತರಲು ಸಾಧ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಘಟನೆಗೆ ಕಾರಣರಾದ ಸಿಬ್ಬಂದಿಯನ್ನು ತಕ್ಷಣವೇ ಅಮಾನತುಗೊಳಿಸಿ, ಕಾನೂನು ಪ್ರಕಾರ ಸಮಗ್ರ ತನಿಖೆ ಮುಂದುವರಿಸಬೇಕು ಎಂದು ಆಗ್ರಹಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular