HomeKarnatakaಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಮೇಲೆ ಫೈರಿಂಗ್

ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಮೇಲೆ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ.

ಗದಗ ಜಿಲ್ಲೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಸಮೀಪ ಘಟನೆ ನಡೆದಿದೆ. ಬಗರ್ ಅಲಿ ಇರಾನಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಂಗಾವತಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಟಗೇರಿ ಬಡಾವಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಹೊಳೆಆಲೂರಿಗೆ ಪಂಚನಾಮೆಗೆ ಹೋಗಿ ವಾಪಸ್ ಬರುವಾಗ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದು, ಈ ವೇಳೆ ಕಾಲಿಗೆ ಫೈರಿಂಗ್ ಮಾಡಿ ಆತನನ್ನು ವಶಕ್ಕೆ ಪಡೆದು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಡಾವಣೆ ಪೊಲೀಸ್ ಠಾಣೆ ಸಿಬ್ಬಂದಿ ಹನುಮಂತ ಓಲೆಕಾರ, ಅಶೋಕ್ ಅವರ ಮೇಲೆ ಬಗರ್ ಅಲಿ ಇರಾನಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಸಿಪಿಐ ಧೀರಜ್ ಶಿಂಧೆ ಫೈರಿಂಗ್ ಮಾಡಿದ್ದಾರೆ. ಗಾಯಾಳು ಪೊಲೀಸರನ್ನು ರೋಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೂನ್ 28ರಂದು ಕಳ್ಳತನ ಆರೋಪದ ಮೇಲೆ ಗಂಗಾವತಿ ಪೊಲೀಸರು ಗದಗ ನಗರದ ಹೆಲ್ತ್ ಕ್ಯಾಂಪ್ ಸಮೀಪ ಬಗರ್ ಅಲಿಯನ್ನು ಬಂಧಿಸಿ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular