ಟ್ರ್ಯಾಕ್ಟರ್ ಹರಿಸಿ ಪೊಲೀಸ್ ಕಾನ್ ಸ್ಟೆಬಲ್ ಹತ್ಯೆಗೈದ ಆರೋಪಿಗೆ ಗುಂಡೇಟು

ಕಲಬುರಗಿ: ಅಕ್ರಮ ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ ಸ್ಟೆಬಲ್ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಾಯಿಬಣ್ಣ ಕರಜಗಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ಸಾಯಿಬಣ್ಣ ಹಲ್ಲೆಗೆ ಯತ್ನಿಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಆತ್ಮರಕ್ಷಣೆಗಾಗಿ ಜೇವರ್ಗಿ ಪಿಎಸ್ಐ ಯಡ್ರಾಮಿ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮಂದೇವಾಲ ಬಳಿ ಸಾಯಿಬಣ್ಣನನ್ನು ಬಂಧಿಸಲಾಗಿದ್ದು, ಆತನನ್ನು ಕರೆತರುವ ವೇಳೆ ಘಟನೆ ನಡೆದಿದೆ. ಆರೋಪಿಯನ್ನು ಕರೆತಂದು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗುವುದು.

ಜೇವರ್ಗಿ ತಾಲೂಕಿನ ಹುಲ್ಲೂರು ಸಮೀಪ ಭೀಮಾ ನದಿಯ ಪಕ್ಕದಲ್ಲಿದ್ದ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅಡ್ಡಗಟ್ಟಲು ಮುಂದಾದ ನೆಲೋಗಿ ಠಾಣೆ ಕಾನ್ಸ್ಟೇಬಲ್ ಮಯೂರ ಭೀಮು ಚೌಹಾಣ್(51) ಅವರ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಲಾಗಿತ್ತು. ಟ್ರ್ಯಾಕ್ಟರ್ ಚಾಲಕ ಸಿದ್ದಣ್ಣ ಕರಜಗಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read