HomeKarnatakaಇನ್ನು ತಿರುಪತಿಯಲ್ಲಿ ರಾಜ್ಯದ ಗಣ್ಯರಿಗೆ ಮೊದಲ ಆರತಿ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಇನ್ನು ತಿರುಪತಿಯಲ್ಲಿ ರಾಜ್ಯದ ಗಣ್ಯರಿಗೆ ಮೊದಲ ಆರತಿ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ಇನ್ಮುಂದೆ ರಾಜ್ಯದ ಗಣ್ಯರಿಗೆ ತಿರುಪತಿಯ ಮೊದಲ ಆರತಿ ನೀಡುವ ಬಗ್ಗೆ ಶೀಘ್ರವೇ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಬನಶಂಕರಿ 6ನೇ ಹಂತರದಲ್ಲಿ ಭಾನುವಾರ ಷಣ್ಮುಖ ಸುಬ್ರಮಣ್ಯ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ತಿರುಪತಿಯಲ್ಲಿ ನಡೆಯುವ ಮೊದಲ ಆರತಿಯನ್ನು ಕರ್ನಾಟಕದ ಜನಪ್ರತಿನಿಧಿಗಳು ಹಾಗೂ ಇತರ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಜೈಲಿಗೆ ಹೋಗಿ ಬಿಡುಗಡೆಯಾಗಿ ಬಂದ ದಿನದಿಂದ ಮನೆದೇವರು ತಿರುಪತಿಗೆ ಹೋಗಿರಲಿಲ್ಲ. ಇತ್ತೀಚೆಗೆ ಭೇಟಿ ನೀಡಿದ ಸಮಯದಲ್ಲಿ ಈ ಬಗ್ಗೆ ಆಲೋಚನೆ ಮಾಡಿದ್ದೇನೆ. ಇದುವರೆಗೆ ತಿರುಮಲ ವೆಂಕಟೇಶ್ವರ ದೇವಾಲಯದ ಒಳ ಮುಖ್ಯ ದ್ವಾರದ ಬಳಿ ತೆರಳಿ ಪೂಜೆ ಮಾಡಲು ಕರ್ನಾಟಕದ ಮುಖ್ಯಮಂತ್ರಿ ಅವರಿಗೆ ಮಾತ್ರ ಅವಕಾಶವಿದೆ. ಈ ಆರತಿಯನ್ನು ಪ್ರತಿದಿನ ನಮ್ಮ ರಾಜ್ಯ ಸರ್ಕಾರದ ವಿಶೇಷ ಅಧಿಕಾರಿ ಪಡೆಯುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ನ್ಯಾಯಾಧೀಶರು ಸೇರಿ ಯಾರಾದರೂ ಭೇಟಿ ನೀಡಿದ್ದರೆ ಅಥವಾ ಸರ್ಕಾರದ ಪರ ಯಾರೇ ತಿರುಪತಿಗೆ ಹೋಗಿದ್ದರೂ ಅವರಿಗೆ ಈ ಆರತಿ ನೀಡಬೇಕು ಎನ್ನುವ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇದು ನನ್ನ ಕಾಲದಲ್ಲಿ ಆಗಿರುವ ಮುಖ್ಯ ಘೋಷಣೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular