ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೊದಲ ದಿನವು ಅತ್ಯಂತ ಯಶಸ್ವಿಯಾಗಿ ಹಾಗೂ ಶಾಂತಿಯುತವಾಗಿ ನಡೆದಿದೆ.
ರಾಜ್ಯ ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳ ನಡುವೆ ನಡೆದ ಈ ಪರೀಕ್ಷೆಯಲ್ಲಿ ಒಟ್ಟು 96.87% ರಷ್ಟು ಗರಿಷ್ಠ ಹಾಜರಾತಿ ದಾಖಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು. ಯಾವುದೇ ಅಹಿತಕರ ಘಟನೆ ಅಥವಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಲ್ಲಿ ಮಂಡಳಿಯು ಯಶಸ್ವಿಯಾಗಿದೆ.
ಮೊದಲ ದಿನದ ಪರೀಕ್ಷೆಗೆ ಒಟ್ಟು 96.87% ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.ರಾಜ್ಯದ ಯಾವುದೇ ಭಾಗದಲ್ಲಿ ಪರೀಕ್ಷಾ ಅಕ್ರಮಗಳು ಅಥವಾ ನಕಲು ಪ್ರಕರಣಗಳು ವರದಿಯಾಗಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಮತ್ತು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ಮೊದಲ ದಿನದ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗಳು ಸುಲಭವಾಗಿದ್ದವು ಎಂದು ಬಹುತೇಕ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

