BIG NEWS: ಆರೋಗ್ಯ ವಿವಿ ಕುಲಪತಿಗಳಾಗಿ ಖಾಸಗಿ ಕಾಲೇಜು ಪ್ರಾಂಶುಪಾಲ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಕಿಮ್ಸ್) ಪ್ರಾಂಶುಪಾಲ ಡಾ. ಭಗವಾನ್ ಬಿ.ಸಿ. ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಆರೋಗ್ಯ ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ಖಾಸಗಿ ಕಾಲೇಜಿನ ಪ್ರಾಂಶುಪಾಲರನ್ನು ಕುಲಪತಿಯನ್ನಾಗಿ ನೇಮಕ ಮಾಡಿದಂತಾಗಿದೆ.

ಈ ಹಿಂದೆ, ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಅಥವಾ ಸರ್ಕಾರಿ ಕರ್ತವ್ಯದಲ್ಲಿರುವ ವೈದ್ಯರನ್ನು ಮಾತ್ರ ನೇಮಿಸಲಾಗುತ್ತಿತ್ತು. ಆದರೆ, ಈ ಬಾರಿ ಖಾಸಗಿ ಕಾಲೇಜಿನ ಪ್ರಾಂಶುಪಾಲರಿಗೆ ಈ ಅವಕಾಶ ದೊರೆತಿದೆ.

ಕುಲಪತಿ ಆಯ್ಕೆ ಸಂಬಂಧ ರಚಿಸಲಾಗಿದ್ದ ಪ್ರೊ. ಎಂ. ರಾಮಚಂದ್ರಗೌಡ ಅಧ್ಯಕ್ಷತೆಯ ಶೋಧನಾ ಸಮಿತಿಯು ಡಾ. ಭಗವಾನ್ ಬಿ.ಸಿ. ಅವರ ಹೆಸರನ್ನು ಶಿಫಾರಸು ಮಾಡಿತ್ತು. ಈ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read