ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ : 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಬರ ಪರಿಹಾರದ ಹಣ ಜಮಾ

ಹೊಸಪೇಟೆ : ರಾಜ್ಯದ  ರೈತರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು,  30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನು ಜಮಾ ಮಾಡಿದೆ30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನು ಜಮಾ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಐತಿಹಾಸಿಕ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರದಿಂದ ನಮ್ಮ ಪಾಲಿನ ನಯಾಪೈಸೆ ಪರಿಹಾರದ ಹಣ ಇದುವರೆಗೂ ಬಂದಿಲ್ಲ. ಆದರೆ ರಾಜ್ಯ ಸರ್ಕಾರ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನು ಜಮಾ ಮಾಡಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್‌ಡಿಆರ್‌ಎಫ್ ನಿಂದ 4,663 ಕೋಟಿ ರೂ. ಮೊತ್ತವನ್ನು ನೀಡಲು ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ, ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ. ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ನಾನೂ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read