HomeEntertainment'ನಾ ನಿನ್ನ ಬಿಡಲಾರೆ' ಚಿತ್ರದ ಫಸ್ಟ್ ಲುಕ್ ರಿಲೀಸ್

‘ನಾ ನಿನ್ನ ಬಿಡಲಾರೆ’ ಚಿತ್ರದ ಫಸ್ಟ್ ಲುಕ್ ರಿಲೀಸ್

ನವೀನ್ ಜಿಎಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ನಾ ನಿನ್ನ ಬಿಡಲಾರೆ’ ಚಿತ್ರದ ಫಸ್ಟ್ ಲುಕ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಪ್ರೇತದ ಈ ಲುಕ್  ನೋಡುಗರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಹಿರಿಯ ನಟ ಅನಂತನಾಗ್ ಹಾಗೂ ಲಕ್ಷ್ಮಿ ಅಭಿನಯದ ‘ನಾ ನಿನ್ನ ಬಿಡಲಾರೆ’ ಎಂಬ ಹಳೆ ಸಿನಿಮಾದ ಟೈಟಲನ್ನೆ ಬಳಸಲಾಗಿದ್ದು, ಈ ಹಾರರ್ ಚಿತ್ರವನ್ನು ತೆರೆ ಮೇಲೆ ವೀಕ್ಷಿಸಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಹಾರರ್ ಥ್ರಿಲ್ಲರ್ ಕಥಾ  ಹಂದರ ಹೊಂದಿರುವ ಈ ಚಿತ್ರದಲ್ಲಿ ಅಂಬಲಿ ಭಾರತಿ ಸೇರಿದಂತೆ ಪಂಚಿ, ಕೆ ಎಸ್ ಶ್ರೀಧರ್, ಶ್ರೀನಿವಾಸ ಪ್ರಭು, ಹರಿಣಿ ಶ್ರೀಕಾಂತ್, ಸೀರುಂದೆ ರಘು, ಲಕ್ಷ್ಮೀದ್ ರೆಡ್ಡಿ, ಮಂಜು ರೆಡ್ಡಿ, ತೆರೆ ಹಂಚಿಕೊಂಡಿದ್ದು, ಕಮಲಾ ಉಮಾ ಭಾರತಿ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ಶ್ರೀಮತಿ ಭಾರತಿ ಬಾಳಿ ನಿರ್ಮಾಣ ಮಾಡಿದ್ದಾರೆ. ದೀಪಕ್ ಸಿಎಸ್ ಸಂಕಲನ, ವೀರೇಶ್ ಛಾಯಾಗ್ರಹಣ, ಹಾಗೂ ಡಿಫ್ರೆಂಟ್ ಡ್ಯಾನಿ ಮತ್ತು ನರಸಿಂಹ ಅವರ ಸಾಹಸ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular