HomeLatest News2025-26 ನೇ ಸಾಲಿನ ಪ್ರಥಮ PUC ವಾರ್ಷಿಕ ಪರೀಕ್ಷೆ: ಶಿಕ್ಷಣ ಇಲಾಖೆ ಮಹತ್ವದ ಆದೇಶ

2025-26 ನೇ ಸಾಲಿನ ಪ್ರಥಮ PUC ವಾರ್ಷಿಕ ಪರೀಕ್ಷೆ: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು :   2025-26ನೇ ಸಾಲಿನ ಪ್ರಥಮ ಪಿಯುಸಿ (PUC) ತರಗತಿಗಳ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯನ್ನು ನಡೆಸುವ ಸಂಬಂಧ ಇಲಾಖೆ ಹೊರಡಿಸಿರುವ ದಾಖಲಾತಿ ಮಾರ್ಗಸೂಚಿ ಅನ್ವಯ ದಿನಾಂಕ 10-02-2026 ರಿಂದ 25-02-2026 ರವರೆಗಿನ ದಿನಗಳಲ್ಲಿ ಪ್ರತಿ ಕಾಲೇಜಿಗೆ ಅನ್ವಯವಾಗುವಂತೆ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಕೊಳ್ಳುವುದು. ಯಾವುದೇ ಕಾರಣಕ್ಕೂ ಪರೀಕ್ಷೆ ಸಂಬಂಧ ಹಣ ಸಂಗ್ರಹಿಸದಂತೆ ಹಾಗೂ ಎಲ್ಲಾ ಪರೀಕ್ಷಾ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಪರೀಕ್ಷೆಯನ್ನು ನಡೆಸಲು ತಿಳಿಸಿದೆ.

ಈ ಸಂಬಂಧ ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಳವಡಿಸಿರುವ ದ್ವಿತೀಯ ಪಿಯುಸಿ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಅನುಸರಿಸಿ, ಅದೇ ಮಾದರಿಯಲ್ಲಿ ಪ್ರಥಮ ಪಿಯುಸಿ ತರಗತಿಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ಯಾವುದೇ ನ್ಯೂನ್ಯತೆಗಳಿಲ್ಲದೆ ಹಾಗೂ ದೂರುಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷಾ ಕಾರ್ಯ ನಡೆಸಲು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನಾಂಕ:25-02-2026 ರೊಳಗಾಗಿ ಎಲ್ಲಾ ಪರೀಕ್ಷಾ ಕಾರ್ಯಗಳನ್ನು ಪೂರ್ಣಗೊಳಿಸಿ ಮೌಲ್ಯಮಾಪನದ ನಂತರ ಅಂಕಗಳನ್ನು SATS ತಂತ್ರಾಂಶದಲ್ಲಿ ಇಂದೀಕರಿಸಿ, ಸದರಿ ಫಲಿತಾಂಶ ಪಟ್ಟಿಯನ್ನು ಡೌಗ್ಲೋಡ್ ಮಾಡಿಕೊಳ್ಳುವುದು. ದಿನಾಂಕ:13-03-2026 ರೊಳಗೆ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರಿಂದ ಫಲಿತಾಂಶ ಪಟ್ಟಿಗೆ ಅನುಮೋದನೆಯನ್ನು ಪಡೆದು ದಿನಾಂಕ: 30-03-2026 ರಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಘೋಷಣೆ ಮಾಡುವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ತಿಳಿಸಲು ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular