HomeKarnatakaBIG NEWS : ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು : ಡಿಸಿಎಂಗೂ ರಾಜಕೀಯ ಸಲಹೆಗಾರರ ನೇಮಕ

BIG NEWS : ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು : ಡಿಸಿಎಂಗೂ ರಾಜಕೀಯ ಸಲಹೆಗಾರರ ನೇಮಕ

ಬೆಂಗಳೂರು : ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನಿಗಮ-ಮಂಡಳಿ ನೇಮಕ ಪಟ್ಟಿ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ. ಪಟ್ಟಿಯಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಪಟ್ಟಿಯಿದ್ದು, ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಸಲಹೆಗಾರರಾಗಲಿದ್ದಾರೆ.

ಇದುವರೆಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ರಾಜಕೀಯ ಕಾರ್ಯದರ್ಶಿಗಳ ನೇಮಕವಾಗುತ್ತಿತ್ತು. ಹಾಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಎಂಎಲ್ ಸಿಗಳಾದ ನಸೀರ್ ಅಹಮದ್ ಮತ್ತು ಕೆ ಗೋವಿಂದರಾಜ್ ಅವರು ರಾಜಕೀಯ ಕಾರ್ಯದರ್ಶಿಗಳಾಗಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular