ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ‘ಲೆಜಿಸ್ಲೇಜರ್ ಕಪ್’ ಚೆಸ್ ಪಂದ್ಯಾವಳಿಯಲ್ಲಿ ಶಾಸಕ ಅಜಯ್ ಸಿಂಗ್ ಗೆ ಪ್ರಥಮ ಬಹುಮಾನ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು.

ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ವಿಶ್ವ ಚೆಸ್ ದಿನದ ಅಂಗವಾಗಿ ಈ ಪಂದ್ಯಾವಳಿ ಆಯೋಜಿಸಿದ್ದು, ಆರು ಸುತ್ತುಗಳಲ್ಲಿ ಪಂದ್ಯಗಳು ನಡೆದು ನೋಡುಗರ ಹುಬ್ಬೇರುವಂತೆ ಮಾಡಿತು.

ಪಂದ್ಯಾಕೂಟದ ಎಲ್ಲಾ ಸುತ್ತಿನಲ್ಲಿ ಜಯ ದಾಖಲಿಸುವ ಮೂಲಕ ಶಾಸಕ ಅಜಯ್ ಸಿಂಗ್ ಅವರು 2 ಲಕ್ಷ ರೂ. ನಗದನ್ನು ಒಳಗೊಂಡಿರುವ ಪ್ರಥಮ ಬಹುಮಾನ ಗೆದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನ ಮತ್ತು ಪ್ರತಾಪ್ ಸಿಂಹ ನಾಯಕ್ ಅವರು ತೃತೀಯ ಬಹುಮಾನ ಗಳಿಸಿದರು.

ವಿಜೇತರೆಲ್ಲರಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read