ಅನಿತಾ ಸೇರಿ ನಾಲ್ವರಿಗೆ ಪತ್ರಕರ್ತೆಯರ ಸಂಘದ ಮೊದಲ ವರ್ಷದ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ಇದೇ ಮೊದಲ ಬಾರಿಗೆ ಮಾಧ್ಯಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಲ್ವರು ಸಾಧಕಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಹಿರಿಯ ಪತ್ರಕರ್ತೆ ಗಾಯತ್ರಿ ಚಂದ್ರಶೇಖರ್, ಪತ್ರಕರ್ತೆ ಅನಿತಾ, ಇಸ್ರೋ ಚಂದ್ರಯಾನ 3 ಉಪ ಯೋಜನೆ ನಿರ್ದೇಶಕಿ ಎಂ.ವಿ. ರೂಪಾ ಸೇರಿ ನಾಲ್ವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕರ್ನಾಟಕ ಪತ್ರಕರ್ತೆಯರ ಸಂಘವು ಈ ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಒಬ್ಬರು ಹಿರಿಯ ಪತ್ರಕರ್ತೆ, ಒಬ್ಬರು ಕಿರಿಯ ಪತ್ರಕರ್ತೆ ಹಾಗೂ ನಾನಾ ಕ್ಷೇತ್ರಗಳ ಸಾಧಕಿಯರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ.

ಮೊದಲ ವರ್ಷದ ಪ್ರಶಸ್ತಿ ಪುರಸ್ಕೃತರನ್ನು ಪ್ರಕಟಿಸಲಾಗಿದೆ. ದೂರದರ್ಶನದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತೆ ಗಾಯತ್ರಿ ಚಂದ್ರಶೇಖರ್, ಪ್ರಜಾವಾಣಿಯ ಅನಿತಾ ಅವರನ್ನು ಪ್ರಸಕ್ತ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ವರ್ಷದ ಮಹಿಳಾ ಸಾಧಕರು ವಾರ್ಷಿಕ ಪ್ರಶಸ್ತಿಗೆ ಇಸ್ರೋ ಚಂದ್ರಯಾನ 3 ಉಪಯೋಜನಾ ನಿರ್ದೇಶಕಿ ಎಂ.ವಿ. ರೂಪಾ ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ಪತ್ರಕರ್ತೆಯರ ಸಂಘ ಮತ್ತು ಬೆಂಗಳೂರು ನಗರ ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 3ರಂದು ಬೆಳಗ್ಗೆ 10.30ಕ್ಕೆ ಜ್ಞಾನಜ್ಯೋತಿ ಸಭಾಂಗಣದ ಹಾಲ್ ನಲ್ಲಿ ನಡೆಯುವ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು

ಬೆಂಗಳೂರು ನಗರ ವಿವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಸಾಮಾಜಿಕ ಕಾರ್ಯಕರ್ತೆ ಕಾತ್ಯಾಯಿನಿ ಚಾಮರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read