ಧಾರವಾಡ : ಮೀನುಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮೀನು ಕೃಷಿಕೊಳ, ಮೀನು ಮರಿ ಪಾಲನಾ ಕೋಳ ನಿರ್ಮಿಸಲು ಸಹಾಯಧನ ಯೋಜನೆ ಅಡಿ ಸಹಾಯಧನಕ್ಕಾಗಿ ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆಯಾ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದ, ಅಗತ್ಯ ದಾಖಲಾತಿಗಳೊಂದಿಗೆ ಮೇ 31, 2025 ರೊಳಗಾಗಿ https://fisheries.karnataka.gov.in/english ವೆಬ್ಸೈಟ್ ಮೂಲಕ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ- 0836-2447416, 9843567265, 9448907603. ಮೀನುಗಾರಿಕೆ ಸಹಾಯವಾಣಿ-8277200300 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

