ಯಾದಗಿರಿ: ಜಿಲ್ಲೆಯ ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ರಾಜ್ಯ ವಲಯ ಯೋಜನೆಯ ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ಮೀನು ಮಾರಾಟ ಮತ್ತು ಸಾಗಾಣಿಕೆಗಾಗಿ 4 ಚಕ್ರ ವಾಹನ ಖರೀದಿಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಅರ್ಹತೆ ಹೊಂದಿರುವವರು ದಾಖಲಾತಿಗಳೊಂದಿಗೆ ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸೆ.15ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಭವನ ಮೊದಲನೇ ಮಹಡಿ ಕೊಠಡಿ ಸಂಖ್ಯೆ ಸಿ-15 ಯಾದಗಿರಿ ಜಿಲ್ಲಾ ಪಂಚಾಯಿತಿ ಮೀನುಗಾರಿಕೆ ಉಪ ನಿರ್ದೇಶಕರು ಕಚೇರಿ, ಜಿಲ್ಲಾಡಳಿತ ಭವನ ಮೊದಲನೇ ಮಹಡಿ ಕೊಠಡಿ ಸಂ.14 ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ, ಶಹಾಪುರ ಲಕ್ಷ್ಮೀನಗರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ, ಸುರಪುರ ಲಕ್ಷ್ಮೀಗುಡಿ ಹತ್ತಿರ ತಹಸಿಲ್ ರಸ್ತೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ಮೀನುಗಾರಿಕೆ ಇಲಾಖೆ