ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ಹಾಗೂ ಸುರಪುರ ತಾಲೂಕಿನ ಮೀನುಗಾರಿಕೆ ಇಲಾಖೆವತಿಯಿಂದ 2025-26ನೇ ಸಾಲಿನ ಪ್ರಧಾನಮಂತ್ರಿ ಮತ್ತ್ವ ಸಂಪದ ಯೋಜನೆಯ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಶಹಾಪುರ, ಸುರಪುರ ಸಹಾಯಕ ನಿರ್ದೇಶಕಿ ಪದ್ಮಾವತಿ ತಿಳಿಸಿದ್ದಾರೆ.
ಶಹಾಪುರ, ವಡಗೇರಾ, ಸುರಪುರ ತಾಲೂಕಿನ 2025-26ನೇ ಸಾಲಿನ ಪ್ರಧಾನ ಮಂತ್ರಿ ಮತ್ತ್ವ ಸಂಪದ ಯೋಜನೆಯ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಬುಡಕಟ್ಟು ಸಮುದಾಯದ, ಪರಿಶಿಷ್ಟ ಪಂಗಡದ ಮೀನು ಮಾರಟಕ್ಕಾಗಿ ಐಸ್ ಬಾಕ್ಸ್ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ನೊಂದಿಗೆ ತ್ರಿಚಕ್ರ ವಾಹನ ಮತ್ತು ಜೀವಂತ ಮಾರಾಟ ಮಳಿಗೆ ಕೇಂದ್ರಗಳನ್ನು ನಿಗದಿತ ಗುರಿಗಳನ್ವಯ ಕೇಂದ್ರ ಸರ್ಕಾರವು ನೀಡಿರುವ ಪಟ್ಟಿಯಲ್ಲಿರುವ ಗ್ರಾಮಗಳಿಗೆ ಮಾತ್ರ ಸೀಮಿತಗೊಳಿಸಿ, ಮೀನುಗಾರಿಕೆಯಲ್ಲಿ ತೊಡಗಿರುವ ಪರಿಶಿಷ್ಟ ಪಂಗಡದ ಆಸಕ್ತರಿಂದ ಡಿ.15ರೊಳಗೆ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರಕಾರ ನೀಡಿರುವ ಗ್ರಾಮಗಳ ಪಟ್ಟಿ ಹೆಚ್ಚಿನ ಮಾಹಿತಿಗಾಗಿ ಶಹಾಪುರ, ಸುರಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರು ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
