HomeKarnatakaಮೀನುಗಾರರಿಗೆ ಗುಡ್ ನ್ಯೂಸ್: 3 ಲಕ್ಷ ರೂ. ವರೆಗೆ ಬಡ್ಡಿರಹಿತ ಸಾಲ, 2 ಲಕ್ಷ ಲೀಟರ್...

ಮೀನುಗಾರರಿಗೆ ಗುಡ್ ನ್ಯೂಸ್: 3 ಲಕ್ಷ ರೂ. ವರೆಗೆ ಬಡ್ಡಿರಹಿತ ಸಾಲ, 2 ಲಕ್ಷ ಲೀಟರ್ ಡೀಸೆಲ್ ಸಬ್ಸಿಡಿ, ಇಂಜಿನ್ ಬದಲಾವಣೆಗೆ 50,000 ರೂ. ಸಹಾಯಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ವಹಿವಾಟು ವಿಸ್ತರಣೆಗಾಗಿ ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ.ನಿಂದ 3 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಡೀಸೆಲ್ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ವರೆಗೆ ಹೆಚ್ಚಳ ಮಾಡಲಾಗುವುದು. ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವು ಸಿಗಲಿದೆ.

ಮೀನುಗಾರಿಕೆ ದೋಣಿಗಳಲ್ಲಿನ ಸೀಮೆಎಣ್ಣೆ ಇಂಜಿನ್ ಗಳನ್ನು ಡೀಸೆಲ್, ಪೆಟ್ರೋಲ್ ಇಂಜಿನ್ ಗಳಾಗಿ ಬದಲಾವಣೆ ಮಾಡಿಕೊಳ್ಳಲು ತಲಾ 50,000 ಸಹಾಯಧನ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ 4000 ದೋಣಿಗಳ ಸೀಮೆ ಎಣ್ಣೆ ಇಂಜಿನ್ ಬದಲಾವಣೆಗೆ 20 ಕೋಟಿ ರೂಪಾಯಿ ಸಹಾಯಧನ ನೀಡಲಾಗುತ್ತದೆ.

ಜಲ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿ ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಯ ವಿಪುಲ ಅವಕಾಶ ಬಳಸಿಕೊಳ್ಳಲಾಗುತ್ತದೆ. ಹೆಚ್ಚಿನ ಬೇಡಿಕೆ ಇರುವ ರೋಹು, ಕಾಟ್ಲಾ ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಗೆ ಪ್ರೋತ್ಸಾಹ ನೀಡಲಾಗುವುದು.

ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ, ಉತ್ತಮ ಮಾರುಕಟ್ಟೆಗೆ ವ್ಯವಸ್ಥೆ ಮಾಡಲಾಗುವುದು. ಶೈತ್ಯಾಗಾರಗಳನ್ನು ಹೆಚ್ಚಳ ಮಾಡಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular