ಮಂಡ್ಯದಲ್ಲಿ ವಿಸಿ ನಾಲೆಗೆ ಕಾರು ಬಿದ್ದು ಘೋರ ದುರಂತ : ಐವರು ಜಲಸಮಾಧಿ

ಮಂಡ್ಯ : ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಜಲಸಮಾಧಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಗ್ರಾಮದ ಹಳೆ ಸೇತುವೆ ಕ್ರಾಸ್ ಬಳಿ ನಡೆದಿದೆ.  

ಪಾಂಡವಪುರ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಇಲ್ಲದ ನಾಲೆಗೆ ಉರುಳಿದ್ದರಿಂದ ಕಾರು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಕಾರಿನೊಳಗಿದ್ದವರು ಹೊರಬರಲಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲೆಯಿಂದ ಕಾರು ಮತ್ತು ಮೃತಪಟ್ಟವರ ಐವರ ಶವಗಳನ್ನು ಹೊರತೆಗೆದಿದ್ದಾರೆ.

ದುರಂತದಲ್ಲಿ ಮೃತಪಟ್ಟವರನ್ನು ಭದ್ರಾವತಿ ಮೂಲದ ಚಂದ್ರಪ್ಪ (61), ಧನಂಜಯ (55), ಬಾಬು ಮತ್ತು ಜಯಣ್ಣ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಸ್ ಹೋಗುವಾಗ  ಘಟನೆ ನಡೆದಿದೆ. ಮೃತರು ಗುಂಗರಹಳ್ಳಿ, ನೊಣವಿನಕೆರೆ, ತಿಪಟೂರು, ಮೂಲದವರಾಗಿದ್ದು, ಭದ್ರಾವತಿಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read