‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮ

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ(ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ ಅವರು ಸಂಘರ್ಷದಲ್ಲಿ ಪಾಕಿಸ್ತಾನದ 35- 40 ಸಿಬ್ಬಂದಿ ಹತರಾಗಿದ್ದಾರೆ ಎಂದು ಹೇಳಿದ್ದಾರೆ.

ಹಲವು ಏಜೆನ್ಸಿಗಳಿಂದ ಲಭ್ಯವಾದ ಮಾಹಿತಿ ಪ್ರಕಾರ, ಪಾಕಿಸ್ತಾನ ಸೇನೆಯ 40 ಯೋಧರು ಗಡಿ ನಿಯಂತ್ರಣ ರೇಖೆಯ ಬಳಿ ಹತ್ಯೆಯಾಗಿದ್ದಾರೆ. ಮತ್ತಷ್ಟು ಸಾವು ನೋವಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ಭಯೋತ್ಪಾದಕರನ್ನು ಶಿಕ್ಷಿಸಲು ಮತ್ತು ಅವರ ಮೂಲಸೌಕರ್ಯವನ್ನು ನಾಶಮಾಡಲು ಸ್ಪಷ್ಟ ಗುರಿಯೊಂದಿಗೆ ‘ಆಪರೇಷನ್ ಸಿಂಧೂರ್’ ನಡೆಸಲಾಗಿತ್ತು. ಒಂಬತ್ತು ಭಯೋತ್ಪಾದಕ ಗುರಿಗಳಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಕೊಲ್ಲಲ್ಪಟ್ಟರು ಎಂದು ತಿಳಿಸಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸಲಾಗಿದೆ. ಭಾರತದ ಸಾರ್ವಭೌಮತೆಗೆ ಎದುರಾಗುವ ಯಾವುದೇ ಬೆದರಿಕೆಯನ್ನು ಹಿಮ್ಮೆಟ್ಟಿಸುತ್ತೇವೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read