HomeIndiaBREAKING: ಮಿನಿ ಟ್ರಕ್ ಪಲ್ಟಿಯಾಗಿ ಐವರು ಸಾವು, ಹತ್ತಾರು ಮಂದಿ ಗಾಯ

BREAKING: ಮಿನಿ ಟ್ರಕ್ ಪಲ್ಟಿಯಾಗಿ ಐವರು ಸಾವು, ಹತ್ತಾರು ಮಂದಿ ಗಾಯ

ಬಸ್ತಾರ್(ಛತ್ತೀಸ್‌ಗಢ): ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಮಿನಿ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಮಹಿಳೆಯರೂ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ತಾರ್‌ನ ಜಗದಲ್‌ಪುರ ಪ್ರದೇಶದಲ್ಲಿ ದರ್ಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದ ಬಗ್ಗೆ ವಿವರಗಳನ್ನು ನೀಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಎಎಸ್ಪಿ) ಮಹೇಶ್ವರ್ ನಾಗ್ ಅವರು, ಜಗದಲ್ಪುರದ ದರ್ಭಾ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಮೇಟಾ ಗ್ರಾಮದ ಬಳಿ ಸುಮಾರು 45 ಜನರನ್ನು ಕರೆದೊಯ್ಯುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿದೆ ಎಂದು ಹೇಳಿದ್ದಾರೆ.

ಮಾಹಿತಿ ಪಡೆದ ಕೂಡಲೇ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದೆ. ಟ್ರಕ್ ಚಾಲಕನ ನಿಯಂತ್ರಣ ತಪ್ಪಿದ ಕಾರಣ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ವೈದ್ಯಾಧಿಕಾರಿ ದಿಲೀಪ್ ಕಶ್ಯಪ್ ಅವರು, ಇದುವರೆಗೆ ಸುಮಾರು 30 ಗಾಯಾಳುಗಳನ್ನು ದಾಖಲಿಸಲಾಗಿದೆ. 4 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular