HomeKarnatakaತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ : ಬಳ್ಳಾರಿಯ ಐವರು ಸಾವು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ : ಬಳ್ಳಾರಿಯ ಐವರು ಸಾವು

ಬಳ್ಳಾರಿ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಳ್ಳಾರಿ ಮೂಲದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ತೆಲಂಗಾಣದ ಮೆಹಬೂಬ್‌ ನಗರ  ಜಿಲೆಲಯ ಕೊಕೋಟ ಬೈಪಾಸ್‌ ನ ತೆಕ್ಕಲಯ್ಯ ದರ್ಗಾ ಬಳಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬಳ್ಳಾರಿ ಮೂಲದ ಐವರು ಸಾವನ್ನಪ್ಪಿದ್ದಾರೆ.

ಮೃತರನ್ನು ಬಳ್ಳಾರಿಯ ಬಸವನಕುಂಟೆಯ ನಿವಾಸಿಗಳಾದ ಅಬ್ದುಲ್‌ ರೆಹಮಾನ್‌, ಫಾತಿಮಾ, ವಾಸಿ, ಬುಸ್ರಾ, ಮಾರಿಯಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular