ಹಾವೇರಿ: ಐವರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಐವರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿದ ಶಾಲೆಯ ಸಿಬ್ಬಂದಿ ಮನೆಗೆ ಕಳುಹಿಸಿದ್ದಾರೆ.
ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಸಣಕಲಬಿದರಿ ಸಮೀಪದ ಶಾಲೆ ಮಕ್ಕಳು ಶಿಗ್ಗಾಂವಿ ತಾಲೂಕಿನ ಶಿಶುನಾಳ ಗ್ರಾಮದ ಜಾತ್ರೆಯಲ್ಲಿ ಪತ್ತೆಯಾಗಿದ್ದಾರೆ.
ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ನಿನ್ನ ರಾತ್ರಿ ವಾಚ್ ಮನ್ ಇರಲಿಲ್ಲ. ನಸುಕಿನ ಜಾವ ಕಾಂಪೌಂಡ್ ಹಾರಿ ಪರಾರಿಯಾಗಿದ್ದ ಐವರು ವಿದ್ಯಾರ್ಥಿಗಳನ್ನು ವಸತಿ ಶಾಲೆಯ ಸಿಬ್ಬಂದಿ ಪತ್ತೆ ಹಚ್ಚಿ ಮನೆಗೆ ಕಳಿಸಿದ್ದಾರೆ.

