ಕಾರ್ –ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ವಿದ್ಯಾರ್ಥಿಗಳು ಸಾವು

ತಿರುವಳ್ಳೂರು: ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಳ್ಳೂರಿನ ತಿರುತ್ತಣಿ ಸಮೀಪ ಭೀಕರ ಅಪಘಾತ ಸಂಭವಿಸಿದೆ.

ಲಾರಿಗೆ ಕಾರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುವಳ್ಳೂರು ಜಿಲ್ಲೆಯ ತಿರುಟ್ಟಣಿ ಬಳಿ ಈ ಘಟನೆ ನಡೆದಿದೆ.

ಸಂತ್ರಸ್ತರನ್ನು ಖಾಸಗಿ ವಿಶ್ವವಿದ್ಯಾಲಯಕ್ಕೆ ಸೇರಿದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕೆಕೆ ಛತ್ರಂ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

https://twitter.com/ANI/status/1822823864352579920

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read