HomeKarnatakaBREAKING : ಐವರು ಶಂಕಿತ ಉಗ್ರರು ಮತ್ತೆ 10 ದಿನ ಪೊಲೀಸ್ ಕಸ್ಟಡಿಗೆ ...

BREAKING : ಐವರು ಶಂಕಿತ ಉಗ್ರರು ಮತ್ತೆ 10 ದಿನ ಪೊಲೀಸ್ ಕಸ್ಟಡಿಗೆ : ಕೋರ್ಟ್ ಆದೇಶ

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಮತ್ತೆ 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಇಂದು ಆದೇಶ ಹೊರಡಿಸಿದೆ.

ಶಂಕಿತ ಉಗ್ರರ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಬೆಂಗಳೂರಿನ ಸಿಸಿಹೆಚ್ 49 ನೇ ನ್ಯಾಯಾಲಯ ಮತ್ತೆ 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಗಳೂರಿನ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 7 ಶಂಕಿತ ಉಗ್ರರ ಪೈಕಿ ಐವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ನಂಬರ್-1 ನಜೀರ್ ಹಾಗೂ ಆರೋಪಿ ನಂಬರ್ 2 ಸದ್ಯ ಪರಾರಿಯಾಗಿದ್ದು, 3 ಸುಹೇಲ್, 4 ಉಮರ್, 5, ಜಾಹೀದ್, 6 ಮುದಾಸಿರ್, ಫೈಜಲ್ ಆರೆಸ್ಟ್ ಆಗಿದ್ದಾರೆ.
ಜನಸಂಖ್ಯೆ ಹೆಚ್ಚಿರುವ ಬಸ್ ನಿಲ್ದಾಣ ಹಾಗೂ ಹೋಟೆಲ್ ಗಳಲ್ಲಿ ಬಾಂಬ್ ಸ್ಪೋಟಿಸಲು ಉಗ್ರರು ಸ್ಕೆಚ್ ಹಾಕಿದ್ದರು. ಈ ಹಿನ್ನೆಲೆ ರಾಜ್ಯದ ಹಲವೆಡೆ ಕಟ್ಟೆಚ್ಚರ ವಹಿಸಲಾಗಿತ್ತು. ಪೊಲೀಸರ ಪ್ರಕಾರ, ಬಂಧಿತ ಐವರು ಆರೋಪಿಗಳು 2017 ರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು, ಅಲ್ಲಿ ಅವರು ಕೆಲವು ಭಯೋತ್ಪಾದಕರೊಂದಿಗೆ ಸಂಪರ್ಕಕ್ಕೆ ಬಂದರು ಮತ್ತು ಸ್ಫೋಟಕಗಳನ್ನು ನಿರ್ವಹಿಸುವ ಬಗ್ಗೆ ತರಬೇತಿ ಪಡೆದಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular