HomeKarnatakaಆ. 14 ರ ನಂತರ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಹೆಸರಿದ್ದವರಿಗೆ 50,000 ರೂ....

ಆ. 14 ರ ನಂತರ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಹೆಸರಿದ್ದವರಿಗೆ 50,000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಆಗಸ್ಟ್ 15ರ ಬಳಿಕ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧಿಸಲಾಗಿದ್ದು, ಯಾರಾದರೂ ಫ್ಲೆಕ್ಸ್, ಬ್ಯಾನರ್ ಹಾಕಿದಲ್ಲಿ 50,000 ರೂ. ದಂಡ ವಿಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾನರ್, ಫ್ಲೆಕ್ಸ್ ಯಾರದೇ ಆಗಿರಲಿ ಸಂಪೂರ್ಣ ನಿಷೇಧಿಸಲಾಗಿದೆ. ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕಬಾರದು. ಯಾರದಾದರೂ ಹೆಸರಿನಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕಿದರೆ ಅವರಿಗೂ 50,000 ರೂ. ದಂಡ ವಿಧಿಸಲಾಗುವುದು. ಇನ್ನು ಮುಂದೆ ಎಫ್ಐಆರ್ ಕೂಡ ದಾಖಲಿಸಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಯಾವುದಾದರೂ ಫ್ಲೆಕ್ಸ್, ಬ್ಯಾನರ್ ಹಾಕುವಂತಹ ಪ್ರಸಂಗ ಬಂದರೆ ಸರ್ಕಾರದಿಂದ ನಿಯಮ ರೂಪಿಸಲಾಗುತ್ತದೆ. ಅಕ್ರಮವಾಗಿ ಯಾರೂ ಫ್ಲೆಕ್ಸ್ ಹಾಕುವಂತಿಲ್ಲ. ಪ್ರಸ್ತುತ ಇರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ಹೈಕೋರ್ಟ್ ಆದೇಶ ಕೂಡ ಇದ್ದು, ಬೆಂಗಳೂರಿನಲ್ಲಿರುವ ಪ್ಲೆಕ್ಸ್, ಬ್ಯಾನರ್ ಗಳನ್ನು ತೆರವು ಮಾಡಲಾಗುವುದು. ಶುಭ ಹಾರೈಕೆ, ಹುಟ್ಟು ಹಬ್ಬ, ಶ್ರದ್ಧಾಂಜಲಿ ಮೊದಲಾದ ಫ್ಲೆಕ್ಸ್ ಬ್ಯಾನರ್ ಗಳನ್ನು ಹಾಕಿದಲ್ಲಿ ಎಫ್ಐಆರ್ ದಾಖಲಿಸಲಾಗುವುದು. ಮಲ್ಟಿ ನ್ಯಾಷನಲ್ ಹೋಲ್ಡಿಂಗ್ಸ್ ತೆರವುಗೊಳಿಸಲು ಹೇಳಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular