HomeIndiaBREAKING: ಕಿಕ್ಕಿರಿದು ಸೇರಿದ ಲಕ್ಷಾಂತರ ಜನರ ಸಮ್ಮುಖದಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ

BREAKING: ಕಿಕ್ಕಿರಿದು ಸೇರಿದ ಲಕ್ಷಾಂತರ ಜನರ ಸಮ್ಮುಖದಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ

ಮುಂಬೈ: ಮುಂಬೈನಲ್ಲಿ ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆ ಆರಂಭವಾಗಿದ್ದು, ಸುಮಾರು 3 ಕಿ.ಮೀ ವಿಜಯೋತ್ಸವ ಮೆರವಣಿಗೆ ಸಾಗಲಿದೆ.

ವಿಜಯೋತ್ಸವ ಮೆರವಣಿಗೆಯ ನಂತರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡದ ಆಟಗಾರರಿಗೆ ಸನ್ಮಾನ, ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಟಿ20 ವಿಶ್ವಕಪ್ ಗೆದ್ದು ಬಂದ ಟೀಂ ಇಂಡಿಯಾ ಆಟಗಾರರಿಗೆ 125 ಕೋಟಿ ರೂಪಾಯಿ ನಗದು ಬಹುಮಾನ ವಿತರಿಸಿ ಸನ್ಮಾನಿಸಲಾಗುವುದು.

ಲಕ್ಷಾಂತರ ಅಭಿಮಾನಿಗಳು ಮುಂಬೈನಲ್ಲಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಜಮಾವಣೆಗೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಸ್ಟೇಡಿಯಂವರೆಗೆ ರಸ್ತೆಯ ಎರಡು ಬದಿಯಲ್ಲಿ ಲಕ್ಷಾಂತರ ಅಭಿಮಾನಿಗಳು ಸೇರಿದ್ದು, ವಿಜಯೋತ್ಸವ ಮೆರವಣಿಗೆಯಲ್ಲಿ ಸಾಗಿದ ಆಟಗಾರರು ಸಂಭ್ರಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೂ ಮುನ್ನ ದೆಹಲಿಯಿಂದ ಹೊರಟು ಮುಂಬೈ ತಲುಪಿದ ಟೀಂ ಇಂಡಿಯಾ ಆಟಗಾರರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಆಟಗಾರರನ್ನು ಹೊತ್ತು ತಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನಕ್ಕೆ ವಾಟರ್ ಸೆಲ್ಯೂಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular