ಶ್ರಾವಣ ಮಾಸದ ಮಧ್ಯಂತರ ಭಾರತದಲ್ಲಿ `ಜಲಪ್ರಳಯ’ : ಕೋಡಿಮಠ ಶ್ರೀಗಳಿಂದ ಸ್ಪೋಟಕ ಭವಿಷ್ಯ!

ಬೆಳಗಾವಿ :  ಶ್ರಾವಣ ಮಾಸದ ಮಧ್ಯಂತರದಲ್ಲಿ ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಶ್ರಾವಣಮಾಸದ ಮಧ್ಯಂತರ ಭಾಗದಲ್ಲಿ ಭಾರೀ ಮಳೆಯಿಂದ ಜಲಪ್ರಳಯ, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶ ಆಗುತ್ತದೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಹೇಳಿದ್ದಾರೆ.

ಪ್ರಕೃತಿಯಲ್ಲಿ ವಿಷಾನಿಲ ಬೀಸುವ ಪ್ರಸಂಗವೂ ಇದ್ದು, ಜಾಗತಿಕ ಮಟ್ಟದಲ್ಲಿ ವಿಷಾನಿಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಭೂಕಂಪನದಿಂದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಾಗಲಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read