ಬೆಂಗಳೂರು: ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ ಬಾಗ್‌ನಲ್ಲಿ ಆಗಸ್ಟ್ 7 ರಿಂದ 18ರ ವರೆಗೆ ನಡೆಯಲಿದೆ.
ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಜೀವನ, ಸಾಧನೆ, ಹೋರಾಟದ ಹಾದಿಯನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗುತ್ತಿದೆ. ಕಿತ್ತೂರಿನ ಐತಿಹಾಸಿಕ ಕೋಟೆ ಹೂವುಗಳಲ್ಲಿ ಅನಾವರಣಗೊಳ್ಳಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆ ಇದೆ.
30 ಲಕ್ಷ ಹೂಗಳನ್ನು ಪ್ರದರ್ಶನಕ್ಕೆ ಬಳಕೆ ಮಾಡಲಾಗುವುದು. 136 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.
ವಯಸ್ಕರಿಗೆ 80 ರೂಪಾಯಿ, ರಜಾ ದಿನಗಳಲ್ಲಿ 100 ರೂಪಾಯಿ, ಮಕ್ಕಳಿಗೆ 30 ರೂ. ಪ್ರವೇಶ ಶುಲ್ಕವಿದ್ದು, ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ. ಬೆಳಗ್ಗೆ 6ರಿಂದ ಸಂಜೆ 7 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಬಹುದಾಗಿದೆ.

