HomeIndiaSHOCKING: ಗುದನಾಳದಲ್ಲಿ 94 ಲಕ್ಷ ರೂ. ಮೌಲ್ಯದ ಚಿನ್ನ ಸಾಗಿಸುತ್ತಿದ್ದವ ಅರೆಸ್ಟ್

SHOCKING: ಗುದನಾಳದಲ್ಲಿ 94 ಲಕ್ಷ ರೂ. ಮೌಲ್ಯದ ಚಿನ್ನ ಸಾಗಿಸುತ್ತಿದ್ದವ ಅರೆಸ್ಟ್

ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ 94 ಲಕ್ಷ ರೂ. ಮೌಲ್ಯದ ಚಿನ್ನದ ಪೇಸ್ಟ್‌ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿಯಲಾಗಿದೆ.

ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಪ್ರಯಾಣಿಕನಿಂದ 94.53 ಲಕ್ಷ ರೂ. ಮೌಲ್ಯದ 1,141 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. ಆರೋಪಿ ಪ್ರಯಾಣಿಕ ಬುಧವಾರ ಕೌಲಾಲಂಪುರದಿಂದ ಏರ್ ಏಷ್ಯಾ ವಿಮಾನ AK-023 ನಲ್ಲಿ ಆಗಮಿಸಿದ್ದು, ತಪಾಸಣೆಯ ಸಮಯದಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿರುಚ್ಚಿ ವಿಮಾನ ನಿಲ್ದಾಣದಲ್ಲಿ, ಬುಧವಾರ ಕೌಲಾಲಂಪುರದಿಂದ ಏರ್ ಏಷ್ಯಾ ವಿಮಾನ ಸಂಖ್ಯೆ AK-023 ಮೂಲಕ ಆಗಮಿಸಿದ ಒಬ್ಬ ಪುರುಷ ಪ್ರಯಾಣಿಕನಿಂದ 94,53,185 ರೂ. ಮೌಲ್ಯದ 1141.000 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಒಂದು ಚಿನ್ನದ ತುಂಡನ್ನು ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular