ನವದೆಹಲಿ: ಫ್ಲೈ ಓವರ್ ಮೇಲೆ ನಿಂತಿದ್ದ ಕಾರಿನಲ್ಲಿ ಮೂರು ಶವ ಪತ್ತೆಯಾಗಿರುವ ಘಟನೆ ದೆಹಲಿಯ ಪೀರಗಢಿಯಲ್ಲಿ ನಡೆದಿದೆ.
ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರೊಂದರಲ್ಲಿ ಮೂರು ಶವಗಳು ಪತ್ತೆಯಾಗಿವೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್(60) ಲಕ್ಷ್ಮೀ ದೇವಿ (40) ಹಾಗೂ ಶಿವ ನರೇಶ್ ಸಿಂಗ್ (47) ಮೃತ ದುರ್ದೈವಿಗಳು.
ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಬಹಳ ಸಮಯದಿಂದ ಕಾರು ನಿಂತಲ್ಲೇ ನಿಂತಿತ್ತು. ಅನುಮಾನಗೊಂಡ ಜನರು ಕಾರಿನ ಬಳಿ ಹೋಗಿ ಪರಿಶೀಲಿಸಿದಾಗ ಒಳಗೆ ಮೂವರು ಸಾವನ್ನಪ್ಪಿರುವುದು ಕಂಡು ಬಂದಿದೆ.
ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

