HomeKarnatakaಮದ್ಯ ಮಾರಾಟಕ್ಕೆ ಸಮಯ ನಿಗದಿ: ಯಾವಾಗ ಮಾರಾಟ ಮಾಡುವಂತಿಲ್ಲ?

ಮದ್ಯ ಮಾರಾಟಕ್ಕೆ ಸಮಯ ನಿಗದಿ: ಯಾವಾಗ ಮಾರಾಟ ಮಾಡುವಂತಿಲ್ಲ?

ನಿಗದಿತ ಸಮಯದಲ್ಲಿ ಮಾತ್ರ ಮದ್ಯ ಮಾರಾಟ ಮಾಡಬೇಕು. ನಿಯಮ ಮೀರಿ ಮದ್ಯ ಮಾರಾಟ ಮಾಡಿದ ಪ್ರಕರಣಗಳು ಕಂಡು ಬಂದರೆ ಪರವಾನಿಗೆ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ/ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

“ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ವಾಸಿಸುವ ಸ್ಥಳ ಸೇರಿದಂತೆ ಜಿಲ್ಲೆಯ ಎಲ್ಲಾ ಮಧ್ಯದ ಅಂಗಡಿಗಳು ನಿಗದಿತ ಸಮಯದಲ್ಲಿ ಮಾತ್ರ ಮಧ್ಯ ಮಾರಾಟ ಮಾಡಬೇಕು” ಎಂದು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಬೇರೆ ಬಾಗಿಲುಗಳ ಮೂಲಕ ಮದ್ಯ ಮಾರಾಟ ಮಾಡಿದ ಪ್ರಕರಣಗಳು ಕಂಡು ಬಂದರೆ ಪರವಾನಿಗೆ ರದ್ದುಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ” ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“18 ವರ್ಷದೊಳಗಿನ ಮಕ್ಕಳನ್ನು ಮದ್ಯ ಖರೀದಿಗೆ ಬಳಸಿಕೊಳ್ಳುವುದರಿಂದ ಮಕ್ಕಳ ಮೇಲೆ ಪರಿಣಾಮ ಬೀರಬಹುದು. ಮದ್ಯಕ್ಕೆ ಬಲಿಯಾಗಿ ಶಿಕ್ಷಣ, ಅಪರಾಧಕ್ಕೆ ಬಲಿಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಎಲ್ಲಾ ಮದ್ಯದ ಅಂಗಡಿಗಳಿಗೂ ಕಡ್ಡಾಯವಾಗಿ ಸೂಚನೆ ನೀಡಬೇಕು” ಎಂದು ತಿಳಿಸಿದರು.

ಸಮಿತಿ ಸದಸ್ಯ ಸಂದೇಶ್, ಮರಿ ಜೋಸೆಫ್, ಮಲ್ಲೇಶ್ ಅಂಬುಗ ಮಾತನಾಡಿ, ಜಿಲ್ಲೆಯಲ್ಲಿ ಹಲವು ಮದ್ಯದ ಅಂಗಡಿಗಳಲ್ಲಿ ಬೆಳಗ್ಗೆ 7.30ರಿಂದಲೇ ಮಾರಾಟ ಪ್ರಾರಂಭ ಮಾಡುತ್ತಾರೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿಯವರು ತನಿಖಾ ತಂಡವನ್ನು ನೇಮಿಸಿ, ಪರಿಶೀಲಿಸಿ ವರದಿ ಸಲ್ಲಿಸಬೇಕು. ಅಂತಹ ಮಧ್ಯ ಅಂಗಡಿಗಳಿಗೆ ದಂಡ ವಿಧಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular