ರಾತ್ರಿ ಚೆನ್ನಾಗಿ ನಿದ್ರೆ ಬರಲು ಅನುಸರಿಸಿ ಈ ಮಾರ್ಗ

ನಿದ್ರೆ ಆರೋಗ್ಯಕ್ಕೆ ತುಂಬಾ ಉತ್ತಮ. ಕೆಲಸದ ಒತ್ತಡ, ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಂದ ಕೆಲವರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಅಂತವರಿಗೆ ರಾತ್ರಿ ಚೆನ್ನಾಗಿ, ಬಹಳ ಬೇಗ ನಿದ್ರೆ ಬರಬೇಕೆಂದರೆ ಈ ಮಾರ್ಗಗಳನ್ನು ಅನುಸರಿಸಿ.

*ಟಿವಿ ಹಾಗೂ ಮೊಬೈಲ್ ನಲ್ಲಿ ಬರುವ ಬ್ಲೂ ಲೈಟ್ ನಿಮ್ಮ ಹಾರ್ಮೋನ್ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಿದ್ರೆ ಬರುವುದಿಲ್ಲ. ಆದಕಾರಣ ನಿದ್ರೆ ಮಾಡುವುದಕ್ಕೆ 2 ಗಂಟೆಗಳ ಮೊದಲು ಇವುಗಳನ್ನು ವೀಕ್ಷಣೆ ಮಾಡುವುದನ್ನು ನಿಲ್ಲಿಸಿ. ಅಥವಾ ಕನ್ನಡಕ ಬಳಸಿ.

* ಬೆಳಿಗ್ಗೆ ಬೇಗನೆ ಎದ್ದೇಳಿ. ಮತ್ತು ದೇಹವನ್ನು ಸೂರ್ಯನ ಬಿಸಿಲಿಗೆ ಒಡ್ಡಿಕೊಳ್ಳಿ. ಇದರಿಂದ ನಿದ್ರೆಯ ಗುಣಮಟ್ಟ ಹೆಚ್ಚುತ್ತದೆ. ಹಾಗೇ ಸಾಧ್ಯವಾದರೆ ಹಗಲಿನಲ್ಲಿ ಕಿರು ನಿದ್ರೆ ಮಾಡುವುದನ್ನು ತಪ್ಪಿಸಿ.

*ರಾತ್ರಿಯ ವೇಳೆ ಜಾಸ್ತಿ ಊಟ ಸೇವಿಸುವುದು ಮತ್ತು ನೀರು ಕುಡಿಯುವುದನ್ನು ತಪ್ಪಿಸಿ. ಇಲ್ಲವಾದರೆ ಪದೇ ಪದೇ ಎಚ್ಚರವಾಗಿ ನಿದ್ರೆಗೆ ಭಂಗ ಉಂಟಾಗುತ್ತದೆ. ನಿದ್ರೆ ಸರಿಯಾಗಿ ಬರಲು ಪ್ರತಿದಿನ ವ್ಯಾಯಾಮ ಮಾಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read