ಬೆಂಗಳೂರು : ಕಬಾಬ್, ಗೋಬಿ ಬೆನ್ನಲ್ಲೇ ಖಾರಬೂಂದಿಯಲ್ಲೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ಖಾರ ತಿಂಡಿಗಳ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಧೃಡವಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಕಬಾಬ್, ಗೋಬಿ ಮಂಚೂರಿಯಲ್ಲೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಪತ್ತೆಯಾಗಿತ್ತು. ಇದೀಗ ಖಾರಬೂಂದಿಯಲ್ಲೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಧೃಡವಾಗಿದೆ. ವರದಿ ಅಧಾರದ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಶೀಘ್ರವೇ ಕ್ರಮ ಕೈಗೊಳ್ಳಲಿದ್ದಾರೆ.