HomeKarnatakaಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಗುಡ್ ನ್ಯೂಸ್: ರದ್ದಾದ ಪಡಿತರ ಚೀಟಿಗಳಿಗೆ ಮರು ಮಂಜೂರಾತಿ

ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಗುಡ್ ನ್ಯೂಸ್: ರದ್ದಾದ ಪಡಿತರ ಚೀಟಿಗಳಿಗೆ ಮರು ಮಂಜೂರಾತಿ

ಬೆಂಗಳೂರು: ರದ್ದಾದ ಪಡಿತರ ಚೀಟಿಗಳ ಮತ್ತೊಮ್ಮೆ ಪರಿಶೀಲಿಸಿ ಮರುಮಂಜೂರಾತಿ ನೀಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯೆ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ 2021ರ ಜೂನ್ 1ರಂದು ಆದೇಶ ಹೊರಡಿಸಿದ್ದು, ಅದರಂತೆ ರದ್ದುಗೊಂಡ ಬಿಪಿಎಲ್ ಪಡಿತರ ಚೀಟಿಗಳಿಗೆ ಮರು ಜೀವ ನೀಡಲಾಗುವುದು ಎಂದು ತಿಳಿಸಿದ್ದಾರೆ.

ನಾಲ್ಕು ಚಕ್ರದ ವೈಯಕ್ತಿಕ ವಾಹನ ಹೊಂದಿದವರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಆಗ ಆದೇಶದಲ್ಲಿ ತಿಳಿಸಲಾಗಿತ್ತು. 2022ರ ಆಗಸ್ಟ್ 28ರಂದು ಆದೇಶ ತಡೆ ಹಿಡಿಯಲಾಗಿದ್ದು, ಈ ಮೊದಲಿನ ಆದೇಶದಂತೆ ರದ್ದುಗೊಂಡಿರುವ ಪಡಿತರ ಚೀಟಿಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ರದ್ದಾದ ಪಡಿತರ ಚೀಟಿಗಳಿಗೆ ಮರುಮಂಜೂರಾತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular