HomeKarnatakaBREAKING: ಫುಡ್ ಪಾಯ್ಸನ್ ಗೆ ಮತ್ತೊಂದು ಬಲಿ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ವಿದ್ಯಾರ್ಥಿ ಸಾವು

BREAKING: ಫುಡ್ ಪಾಯ್ಸನ್ ಗೆ ಮತ್ತೊಂದು ಬಲಿ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ವಿದ್ಯಾರ್ಥಿ ಸಾವು

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ವಿಷಾಹಾರ ಸೇವಿಸಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಫುಡ್ ಪಾಯ್ಸನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಮೀಬ್ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಮೃತಪಟ್ಟಿದ್ದಾನೆ. ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ಮಳವಳ್ಳಿ ತಾಲೂಕಿನ ಕಾಗೆಪುರ ಗ್ರಾಮದ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಹೋಟೆಲ್ ನಲ್ಲಿ ಶುಕ್ರವಾರ ಹೋಳಿ ಆಚರಣೆಗಾಗಿ ಉದ್ಯಮಿ ಪುಷ್ಪೇಂದ್ರ ಕುಮಾರ್ 150 ಮಂದಿಗೆ ಊಟ ಬುಕ್ ಮಾಡಿದ್ದರು. ಊಟ ಮಾಡಿದ ಉದ್ಯಮಿಯ 61 ಸಂಬಂಧಿಕರು ಸೇರಿ ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದರು. ಗೋಕುಲ ವಿದ್ಯಾ ಸಂಸ್ಥೆಯ 5 ವಿದ್ಯಾರ್ಥಿಗಳನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಮೇಘಾಲಯ ವಿದ್ಯಾರ್ಥಿ ಮೃತಪಟ್ಟಿದ್ದು, ಇದೀಗ ಮತ್ತೊಬ್ಬ ವಿದ್ಯಾರ್ಥಿ ನಮೀಬ್ ಕೂಡ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular