BIG NEWS: ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ವಿಷಾಹಾರ ಸೇವಿಸಿ ಅನಾಥಾಶ್ರಮದ ವಿದ್ಯಾರ್ಥಿ ಸಾವು ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿಸಿದ್ದಾರೆ.

ದುರ್ಘಟನೆಯಲ್ಲಿ ಮಡಿದ ಬಾಲಕನ‌ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read